ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಶಾಸಕ ಯತ್ನಾಳ್ ಮಾಡಿರುವ ಆರೋಪ ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಇದೀಗ ಸರಣಿ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಯತ್ನಾಳ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ.
ರಾಜ್ಯBJP ಅಧ್ಯಕ್ಷತೆ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನ ತಪ್ಪಿಹೋಗಿರುವುದರಿಂದ
ಯತ್ನಾಳ್ ಅವರು ಕೆರಳಿ ಕೆಂಡವಾಗಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಮೌಲ್ವಿ ತನ್ವೀರ್ ಹಾಶ್ಮಿ ಜೊತೆಗಿನ ನನ್ನ ಪೋಟೋವನ್ನು ತೋರಿಸಿ ಆರೋಪ ಮಾಡಿದ್ದಾರೆ. ಈ ಆರೋಪದ ನಂತರ ಮೌಲ್ವಿ ಅವರ ಜೊತೆಗಿನ ಪ್ರಧಾನಿ ನರೇಂದ್ರ ಮೋದಿ ಅವರ ಸಂಬಂಧದ ವಿವರವೂ ಹೊರಬರಲಿದೆ ಎನ್ನುವುದು ಅವರಿಗೆ ಖಂಡಿತ ಗೊತ್ತಿತ್ತು. ಅವೆಲ್ಲವೂ ಬಯಲಾಗಿ ಪ್ರಧಾನಿ ಮತ್ತು ಬಿಜೆಪಿ ನಾಯಕರು ಮುಜುಗರಕ್ಕೀಡಾಗಲಿ ಎನ್ನುವ ದುರುದ್ದೇಶದಿಂದ ನನ್ನ ವಿರುದ್ಧ ಆರೋಪ ಮಾಡುವ ಆಟ ಆಡಿದ್ದಾರೆ.
ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಪೋಟೊವನ್ನು ಹಿಡ್ಕೊಂಡು @BJP4Karnataka
ಶಾಸಕ @BasanagoudaBJPಅವರು ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ @narendramodi ಅವರು ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ. ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿರುವುದು ಮಾಧ್ಯಮಗಳಲ್ಲಿ ಬಿಡುಗಡೆಯಾಗಿರುವ ಪೋಟೊಗಳು ಸ್ಪಷ್ಟವಾಗಿ ಹೇಳುತ್ತಿವೆ. ದೀರ್ಘಕಾಲದಿಂದ ಹಾಶ್ಮಿ ಅವರಿಗೆ ಅತ್ಯಂತ ಆತ್ಮೀಯರಾಗಿರುವ ಮತ್ತು ಊರಿನಲ್ಲಿ ತನ್ನ ನೆರೆಹೊರೆಯಾಗಿರುವ ಯತ್ನಾಳ್ ಅವರಿಗೆ ಇದು ತಿಳಿದಿರಲಿಲ್ಲ ಎನ್ನುವುದನ್ನು ನಂಬಲು ಸಾಧ್ಯವೇ?
ಇಂದಿನ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಸುದ್ದಿಯ ಪ್ರಕಾರ ಮೌಲ್ವಿ ತನ್ವೀರ್ ಹಾಶ್ಮಿ ಕುಟುಂಬದ ಜೊತೆಯಲ್ಲಿ ಶಾಸಕ @BasanagoudaBJPಅವರಿಗೆ ವ್ಯಾಪಾರಿ ಸಂಬಂಧ ಕೂಡಾ ಇದೆ ಎನ್ನುವುದು ಬಯಲಾಗಿದೆ. ಯತ್ನಾಳ್ ಅವರ ಆರೋಪದಂತೆ ತನ್ವೀರ್ ಹಾಶ್ಮಿ ಅವರಿಗೆ ಐಸಿಸ್ ಜೊತೆ ಸಂಬಂಧ ಇರುವುದಾಗಿದ್ದರೆ ಅವರ ಜೊತೆಗೆ ವ್ಯವಹಾರದ ಪಾಲುದಾರರಾಗಿರುವ ಯತ್ನಾಳ್ ಅವರಿಗೆ ಅದು ಗೊತ್ತಿರಲಿಲ್ಲವೇ? ಗೊತ್ತಿದ್ದೂ ಸುಮ್ಮನಿರಲು ಕಾರಣವೇನು? ಇಷ್ಟು ಸಮಯದ ನಂತರ ಇಂತಹ ಆರೋಪ ಮಾಡಲು ಕಾರಣಗಳೇನು ಎನ್ನುವುದನ್ನು ಕೂಡಾ ಕೇಂದ್ರ @BJP4India ಸರ್ಕಾರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.