
ಬೆಳಗಾವಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಕೋಮುಗಲಭೆ ಹೆಚ್ಚಳವಾಗುತ್ತದೆ ಎಂಬ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು ಆರೋಪ ಮಾಡೋದು ಬಿಟ್ಟು, ಬೇರೆ ಏನು ಕೆಲಸ ಇದೆ. ಆರೋಪ ಮಾಡುವುದೇ ಅವರ ಕೆಲಸ, ಅರೋಪ ಮಾಡುತ್ತಿರುವುದೆಲ್ಲವೂ ಸುಳ್ಳು. ಕೋಮುಗಲಭೆ ಎಲ್ಲಿ ನಡೆದಿದೆ ಎಂದು ಬಿಜೆಪಿಗೆ ಪ್ರಶ್ನಿಸಿದ್ದಾರೆ.
ಶಿವಮೊಗ್ಗ ನಗರದಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲು ಎಸೆದಿದ್ದಾರೆ. ಆರೋಪಿಗಳನ್ನು ಬಂಧಿಸಿ ಕಾನೂನಡಿ ಪೊಲೀಸರು ಕ್ರಮ ಕೈಗೊಳ್ಳಲಾಗುತ್ತದೆ. ನಾವು ಕೋಮುಗಲಭೆಗೆ ತಕ್ಷಣ ಕ್ರಮ ಕೈಗೊಂಡಿದ್ದೇವೆ. ಯಾರೇ ಕೋಮುಗಲಭೆ ಮಾಡಿದ್ರೆ ಅವರ ವಿರುದ್ಧ ಕಠಿಣ ಕ್ರಮ. ಬಿಜೆಪಿಯವರು ಪ್ರತಿಭಟನೆ ಮಾಡಲಿ, ಪ್ರತಿಭಟನೆಗೆ ಅಡ್ಡಿ ಮಾಡುವುದಿಲ್ಲ. ಯಾವುದೇ ಪ್ರತಿಭಟನೆ ಶಾಂತಿಯುತವಾಗಿರಬೇಕು ಎಂದು ಹೇಳಿದ್ದಾರೆ.