ಭಾರತದ ಧ್ವಜ ಕೈಯಲ್ಲಿ ಹಿಡಿದುಕೊಂಡು ಕಾರ್ಯಕರ್ತರೊಬ್ಬರು ಸಿಎಂ ಸಿದ್ದರಾಮಯ್ಯ ಶೂ ಲೇಸ್ ಕಟ್ಟಿದ್ದಾರೆ ಎನ್ನಲಾದ ವಿಡಿಯೋವೊಂದು ವಿವಾದ ಸೃಷ್ಟಿಸಿದೆ.
ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್’ಗೆ ಯಾವಾಗಲೂ ಕಾಲ ಕಸ. ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ ಮುಖ್ಯಮಂತ್ರಿಗಳು ಅದನ್ನು ಆಕ್ಷೇಪಿಸದೆ ಉತ್ತೇಜಿಸುವ ಮಾದರಿಯಲ್ಲಿ ಉಡಾಫೆ ಪ್ರದರ್ಶಿಸಿರುವುದು ರಾಷ್ಟ್ರ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ. ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾರತೀಯರ ಕ್ಷಮೆ ಕೇಳಲಿ ಎಂದು ಆಗ್ರಹಿಸಿದ್ದಾರೆ.