ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಕೆಎಸ್ಆರ್ಟಿಸಿ ಪಲ್ಲಕ್ಕಿ ಉತ್ಸವ ಶುರುವಾಗಿದ್ದು, ಸಿಎಂ ಸಿದ್ದರಾಮಯ್ಯನವರು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಕೆಎಸ್ಆರ್ಟಿಸಿ ಪಲ್ಲಕ್ಕಿ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ.
48 ಕೆಎಸ್ ಆರ್ ಟಿಸಿ ಪಲ್ಲಕ್ಕಿ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ಕೆಎಸ್ ಆರ್ ಟಿಸಿ ಪಲ್ಲಕ್ಕಿ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಇಂದು ಚಾಲನೆ ನೀಡಿದರು.
40 ನಾನ್ ಎಸಿ ಬಸ್ ಗಳು ಸೇರಿ 148 ಬಸ್ ಗಳಿಗೆ ಚಾಲನೆ ನೀಡಲಾಗಿದ್ದು. 148 ಬಸ್ ಗಳ ಪೈಕಿ 100 ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. 44 ಎಸಿ ಸ್ಲೀಪರ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಇಂದಿನಿಂದ ಬಸ್ ಸಂಚಾರ ಆರಂಭವಾಗಲಿದೆ.ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.
ಪಲ್ಲಕ್ಕಿ ಸ್ಲೀಪರ್ ಬಸ್ 28 ಸೀಟ್ ಸಾಮರ್ಥ್ಯ ಹೊಂದಿದ್ದು, ಪ್ರತಿ ಬಸ್ ಬೆಲೆ 45 ಲಕ್ಷ ರೂಪಾಯಿ ಇರಲಿದೆ.40 ಬಸ್ಗಳ ಪೈಕಿ 30 ಬಸ್ಗಳು ರಾಜ್ಯದೊಳಗೆ ಸಂಚರಿಸಲಿವೆ.ಉಳಿದ 10 ಬಸ್ಗಳು ಬೆಂಗಳೂರಿನಿಂದ ಹೊರರಾಜ್ಯಗಳಿಗೆ ಸಂಚರಿಸಲಿವೆ.