ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ಆಯೋಜಿಸಿರುವ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ – 2024 ಕಾರ್ಯಕ್ರಮವನ್ನುಉದ್ಘಾಟಿಸಿದರು.
ದ್ವಿಚಕ್ರ ವಾಹನ ಚಾಲನೆ ಮಾಡುವಾಗ ತಪ್ಪದೇ ಹೆಲ್ಮೆಟ್ ಧರಿಸಿ,ಹೆಲ್ಮೆಟ್ ಬೆಲ್ಟ್ ಹಾಕುವುದನ್ನು ಮರೆಯದಿರಿ.ಪ್ರತಿ ಜೀವವೂ ಅಮೂಲ್ಯ,ಅರೆಕ್ಷಣ ಎಚ್ಚರ ತಪ್ಪಿದರೂ ಅಪಘಾತ ಸಂಭವಿಸಬಹುದುಸಂಚಾರ ನಿಯಮ ಪಾಲಿಸಿ, ಸುರಕ್ಷಿತವಾಗಿರಿ ಎಂದು ವಾಹನ ಸವಾರರಿಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಈ ವೇಳೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಗೃಹಸಚಿವರಾದ ಡಾ|| ಜಿ. ಪರಮೇಶ್ವರ, ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಶಾಸಕರಾದ ರಿಜ್ವಾನ್ ಅರ್ಷದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.