ಬೆಂಗಳೂರು : ಬೆಂಗಳೂರಿನಲ್ಲಿ ಇಂದಿನಿಂದ 2 ದಿನ ರಾಜ್ಯ ಮಟ್ಟದ ಉದ್ಯೋಗ ಮೇಳ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವ ಶರಣ ಪ್ರಕಾಶ್ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಶಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ. 26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿದ್ದು, ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ https://skillconnect.kaushalkar.com ಲಿಂಕ್ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸುವಂತೆ ಕೌಶಲ್ಯಾಭಿವೃದ್ದಿ ಅಧಿಕಾರಿಗಳು ತಿಳಿಸಿದ್ದಾರೆ.
ಫೆ.26, 27 ರಂದು ರಾಜ್ಯ ಸರ್ಕಾರದಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಆಸಕ್ತರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಅರಮನೆ ಮೈದಾನ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ಈ ಉದ್ಯೋಗ ಮೇಳದಲ್ಲಿ ಸುಮಾರು 500 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್, ಇತರೆ ವಿದ್ಯಾರ್ಹತೆ ಹೊಂದಿರುವ ಜಿಲ್ಲೆಯ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ನೊಂದಣಿ ಮಾಡಿಕೊಳ್ಳಬಹುದು.
ನೊಂದಣಿ ಹೇಗೆ
ಆಸಕ್ತ ಅಭ್ಯರ್ಥಿಗಳು https://skillconnect.kaushalkar.com/ ನಲ್ಲಿ ಹೆಸರು ನೊಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ನೊಂದಣಿ ಹಂತಗಳು..!
ಹಂತ 1 : https://skillconnect.kaushalkar.com/new ಭೇಟಿ ನೀಡಿ
ಹಂತ 2 : ರಿಜಿಸ್ಟರ್ ಮೇಲೆ ಕ್ಲಿಕ್ ಮಾಡಿ
ಹಂತ 3 : ಉದ್ಯೋಗ ಮೇಳ ಕ್ಲಿಕ್ ಮಾಡಿ
ಹಂತ 4: ಅಭ್ಯರ್ಥಿ ನೋಂದಣಿ ಮೇಲೆ ಕ್ಲಿಕ್ ಮಾಡಿ
ಹಂತ 5 : ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಿ