ಕೋಲಾರ : ಕೋಲಾರ ಜಿಲ್ಲೆ ಬಂಗಾರಪೇಟೆ ತಾಲ್ಲೂಕು ಯರಗೋಳ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಯರಗೋಳ್ ಡ್ಯಾಂ ಅನ್ನು ಸಿಎಂ ಸಿದ್ದರಾಮಯ್ಯ ಇದೀಗ ಲೋಕಾರ್ಪಣೆ ಮಾಡಿದ್ದಾರೆ.
ಯರಗೋಳ ಗ್ರಾಮದ ಬಳಿ ನಿರ್ಮಾಣ ಮಾಡಿರುವ ಈ ಡ್ಯಾಮ್ ಮೂರು ತಾಲೂಕು ಹಾಗೂ 45 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಯರಗೋಳು ಗ್ರಾಮದ ಬಳಿ ವ್ಯರ್ಥವಾಗಿ ತಮಿಳುನಾಡಿಗೆ ಹರಿದು ಹೋಗುತ್ತಿದ್ದ ನೀರಿಗೆ ಅಡ್ಡಲಾಗಿ ಡ್ಯಾಂ ನಿರ್ಮಾಣ ಮಾಡಲಾಗಿದೆ.
ಬಹತೇಕ ಅರ್ಧ ಟಿಎಂಸಿಯಷ್ಟು ನೀರು ಶೇಖರಣೆ ಸಾಮರ್ಥ್ಯ ಹೊಂದಿರುವ ಯರಗೋಳ್ ಡ್ಯಾಂ ಸತತ 17 ವರ್ಷಗಳ ನಂತರ ಯೋಜನೆ ಪೂರ್ಣವಾಗಿದ್ದು, ಅನ್ನು ಸಿಎಂ ಸಿದ್ದರಾಮಯ್ಯ ಇದೀಗ ಲೋಕಾರ್ಪಣೆ ಮಾಡಿದ್ದಾರೆ.
ಈ ವೇಳೆ ಸಿಎಂ ಸಿದ್ದರಾಮಯ್ಯ ಅವರಿಗೆ ಸಚಿವ ಕೆಹೆಚ್ ಮುನಿಯಪ್ಪ, ಬೈರತಿ ಸುರೇಶ್ ಸೇರಿ ಜಿಲ್ಲೆಯ ಶಾಸಕರುಗಳು ಸಾಥ್ ನೀಡಿದರು.