![](https://kannadadunia.com/wp-content/uploads/2024/01/rahulgandhi-1.jpg)
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಅರಮನೆ ಮೈದಾನದಲ್ಲಿ ಆಯೋಜಿಸಿರುವ “ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024” ಮತ್ತು “ಸಿರಿಧಾನ್ಯ ತಿನಿಸುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆ”ಗಳನ್ನು ಉದ್ಘಾಟಿಸಿದರು.
ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ಬಿ.ಆರ್.ಪಾಟೀಲ್, ಉತ್ತರ ಪ್ರದೇಶ ಸರ್ಕಾರದ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಸಾಹಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರುಗಳಾದ ವಿನಯ್ ಕುಲಕರ್ಣಿ, ಸುಧಾಮ ದಾಸ್, ರಾಜೂಗೌಡ, ವಿನಯ್ ಕುಲಕರ್ಣಿ, ದಿನೇಶ್ ಗೂಳಿಗೌಡ, ಕೋನರೆಡ್ಡಿ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.