ಬೆಂಗಳೂರು : ತೀವ್ರ ಜ್ವರದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ (Manipal Hospital) ಚಿಕಿತ್ಸೆ ಪಡೆಯುತ್ತಿರುವ ಪತ್ನಿ ಪಾರ್ವತಿ (Parvathy’) ಅವರ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ (Cm Siddaramaiah) ವಿಚಾರಿಸಿದ್ದಾರೆ.
ಇಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಪಾರ್ವತಿ ಅವರ ಆರೋಗ್ಯವನ್ನು ವಿಚಾರಿಸಿದ ಸಿಎಂ ಸಿದ್ದರಾಮಯ್ಯ, ಚೆನ್ನಾಗಿದ್ದಾರೆ, ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿ ಆಸ್ಪತ್ರೆಯಿಂದ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ತಾಯಿ ಜೊತೆಗೆ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಉಳಿದುಕೊಂಡಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರನ್ನ ನಿನ್ನೆ ರಾತ್ರಿ 11.30 ಕ್ಕೆ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.