alex Certify BIG NEWS: ಲೋಕಾಯುಕ್ತ ವಿಚಾರಣೆ ಅನುಮತಿಗೆ ತ್ವರಿತ ತೀರ್ಮಾನ ಕೈಗೊಳ್ಳಲು ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲೋಕಾಯುಕ್ತ ವಿಚಾರಣೆ ಅನುಮತಿಗೆ ತ್ವರಿತ ತೀರ್ಮಾನ ಕೈಗೊಳ್ಳಲು ಸಿಎಂ ಸೂಚನೆ

ಬೆಂಗಳೂರು: ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ನೀಡುವಲ್ಲಿ ವಿಳಂಬವಾಗುತ್ತಿದ್ದು, ಈ ಬಗ್ಗೆ ಕೂಡಲೇ ಕ್ರಮ ಕೈಗೊಂಡು ಎಲ್ಲಾ ಇಲಾಖೆಗಳ ಮಾಹಿತಿಯನ್ನು ಲೋಕಾಯುಕ್ತಕ್ಕೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಲೋಕಾಯುಕ್ತ ವಿಚಾರಣೆಗೆ ಸಂಬಂಧಿಸಿದಂತೆ ಅನುಮತಿ ವಿಳಂಬವಾಗುತ್ತಿರುವುದರ ಬಗ್ಗೆ ಸಭೆ ನಡೆಸಿದ ಸಿಎಂ ಈ ಬಗ್ಗೆ ಸೂಚನೆ ನೀಡಿದ್ದಾರೆ.

ವಿವಿಧ ಪ್ರಕರಣಗಳಲ್ಲಿ ಲೋಕಾಯುಕ್ತ ವಿಚಾರಣೆಗೆ ಅನುಮತಿ ನೀಡಲು ವಿಳಂಬ ಧೋರಣೆ ಅನುಸರಿಸಲಾಗುತ್ತಿದೆ. ಇದರಿಂದ ಜನರಿಗೆ ತಪ್ಪು ಸಂದೇಶ ಹೋಗುತ್ತದೆ. ಹಾಗಾಗಿ ವಿಳಂಬ ಮಾಡದೇ ಕೂಡಲೇ ತೀರ್ಮಾನ ಕೈಗೊಂಡು ಲೋಕಾಯುಕ್ತರಿಗೆ ಆದೇಶ ಕಳುಹಿಸುವಂತೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...