alex Certify ವಿದ್ಯಾರ್ಥಿಗಳಿಗೆ ಗಾಂಧೀಜಿ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗಾಂಧೀಜಿ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ವಿದ್ಯಾರ್ಥಿಗಳಿಗೆ ಗಾಂಧೀಜಿ ಬಗ್ಗೆ ಪ್ರಬಂಧ ಸ್ಪರ್ಧೆ ನಡೆಸುವಂತೆ ಶಿಕ್ಷಣ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

‘21ನೆ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು ಎಂಬ ವಿಷಯದ ಕುರಿತಾದ ಪ್ರತಿ ಶಾಲೆಗಳ 6ನೆ ತರಗತಿ ನಂತರದ ವಿದ್ಯಾರ್ಥಿಗಳಿಗೆ ( ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಸೇರಿದಂತೆ ಕಾಲೇಜು, ವಿಶ್ವವಿದ್ಯಾಲಯಗಳ ಪದವಿ, ಸ್ನಾತಕೋತ್ತರ ಪದವಿ ಹಾಗೂ ಸಂಶೋಧನಾ ವಿದ್ಯಾರ್ಥಿಗಳ ವರೆಗೆ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ) ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸುವುದರಿಂದ ಗಾಂಧೀಜಿಯವರನ್ನು ಅರಿತುಕೊಳ್ಳಲು ಇನ್ನೂ ಹೆಚ್ಚಿನ ಅವಕಾಶ ನೀಡಿದಂತಾಗುತ್ತದೆ, ಹಾಗಾಗಿ ಈ ತಿಂಗಳ ಅಂತ್ಯದೊಳಗೆ ಸ್ಪರ್ಧೆಗಳನ್ನು ನಡೆಸಲು ಕ್ರಮ ವಹಿಸಬೇಕು ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...