ಬೆಂಗಳೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನಿವೃತ್ತ ಸರ್ಕಾರಿ ನೌಕರರನ್ನು ತಕ್ಷಣ ಕರ್ತವ್ಯದಿಂದ ಬಿಡುಗಡೆಗೆ ಕ್ರಮ ತೆಗೆದುಕೊಳ್ಳುವಂತೆ ಮುಖ್ಯ ಕಾರ್ಯದರ್ಶಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯೂ ಸೇರಿ ರಾಜ್ಯ ಸರ್ಕಾರದ ಕೆಲವು ಇಲಾಖೆಗಳಲ್ಲಿ ಮತ್ತು ಸಚಿವಾಲಯದಲ್ಲಿ ಅನಗತ್ಯ ಹುದ್ದೆಗಳನ್ನು ಸೃಜಿಸಿ, ನಿವೃತ್ತ ಅಧಿಕಾರಿ, ನೌಕರರನ್ನು ಸಮಾಲೋಚಕರು, ವಿಶೇಷ ಸಂಪನ್ಮೂಲ ವ್ಯಕ್ತಿಗಳಾಗಿ ನೇಮಿಸಿಕೊಳ್ಳಲಾಗಿದೆ.
ನಿವೃತ್ತ ನೌಕರರ ನೇಮಕದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿ ಆರ್ಥಿಕ ಹೊರೆ ಆಗುತ್ತಿದೆ. ಹೀಗಾಗಿ ಗುತ್ತಿಗೆ, ಹೊರ ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡವರನ್ನು ಬಿಡುಗಡೆ ಮಾಡಿ ಈ ಹುದ್ದೆಗಳಿಗೆ ಹಾಲಿ ಕರ್ತವ್ಯದಲ್ಲಿರುವ ಅಧಿಕಾರಿ, ಸಿಬ್ಬಂದಿ ನಿಯೋಜನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಸ್‌ಗೆ ಬರೆದ ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.