alex Certify ಹೆಚ್ಚಿನ ಬೇಡಿಕೆಯ ಸಿರಿ ಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಿ: ರೈತರಿಗೆ ಸಿಎಂ ಸಲಹೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೆಚ್ಚಿನ ಬೇಡಿಕೆಯ ಸಿರಿ ಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಿ: ರೈತರಿಗೆ ಸಿಎಂ ಸಲಹೆ

ಬೆಳಗಾವಿ: ಇಡೀ ದೇಶದಲ್ಲಿ ಕರ್ನಾಟಕವು ಸಿರಿಧಾನ್ಯ ಉತ್ಪಾದನೆಯಲ್ಲಿ ಮೂರನೇ ಸ್ಥಾನದಲ್ಲಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಕೃಷಿಯಲ್ಲಿ ತೊಡಗಿಕೊಳ್ಳಬೇಕು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ಇಂದು ಬೆಳಗಾವಿಯ ಸುವರ್ಣಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳದ ಪೂರ್ವಭಾವಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಇದೇ ಡಿಸೆಂಬರ್ 23, 24, 25 ರಂದು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಅಂತಾರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ವಾಣಿಜ್ಯ ಮೇಳ ನಡೆಯಲಿದೆ ಎಂದರು.

ದೇಶ ವಿದೇಶಗಳಲ್ಲಿ ಸಿರಿಧಾನ್ಯಗಳ ಬೇಡಿಕೆ ಹೆಚ್ಚಾಗುತ್ತಿದೆ. ವಿಶ್ವದಲ್ಲಿ 903.61 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ಬೆಳೆಯಲಾಗುತ್ತಿದೆ. ಭಾರತದಲ್ಲಿ 31.50 ರಷ್ಟು ಬೆಳೆಯುತ್ತಿದ್ದು, ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿರಿಧಾನ್ಯ ಬೆಳೆಯುವ ದೇಶವಾಗಿದೆ. ಸುಮಾರು 18.38 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 22.16 ಲಕ್ಷ ಟನ್ ಗಳಷ್ಟು ಸಿರಿಧಾನ್ಯವನ್ನು ರಾಜ್ಯದಲ್ಲಿ ಬೆಳೆಯಲಾಗುತ್ತಿದೆ. ಇದರಲ್ಲಿ ಪ್ರೊಟೀನ್ ಹಾಗೂ ನಾರಿನ ಅಂಶ ಹೆಚ್ಚಾಗಿದೆ. ಜನರಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಾಗೂ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಲು ಸಿರಿಧಾನ್ಯದ ಬಳಕೆ ಸಹಕಾರಿಯಾಗಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...