alex Certify BIG NEWS : ನಾಳಿನ ಸರ್ವಪಕ್ಷ ಸಭೆಗೆ ‘HDK’ ಗೆ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಾಳಿನ ಸರ್ವಪಕ್ಷ ಸಭೆಗೆ ‘HDK’ ಗೆ ಆಹ್ವಾನ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾಳೆ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಇದೀಗ ಮಾಜಿ ಸಿಎಂ ಕುಮಾರಸ್ವಾಮಿಗೆ ಆಹ್ವಾನ ನೀಡಲಾಗಿದೆ.

ಸರ್ವಪಕ್ಷಗಳ ಸಭೆಗೆ ಬನ್ನಿ ಎಂದು ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಕುಮಾರಸ್ವಾಮಿಗೆ ಆಹ್ವಾನ ನೀಡಿದ್ದಾರೆ.
ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಹರಿಸಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರ್ವಪಕ್ಷ ಸಭೆ ಕರೆಯುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದರು. ಕಾವೇರಿ ನದಿ ವಿಚಾರ ಮಾತ್ರವಲ್ಲ ಮಹದಾಯಿ ಸೇರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆಯುವ ಆಲೋಚನೆ ಸರ್ಕಾರಕ್ಕೂ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದರು. ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕಾವೇರಿ, ಮಹದಾಯಿ, ಕೃಷ್ಣಾ ನದಿ ವಿವಾದ ಸೇರಿದಂತೆ ಹಲವು ವಿಚಾರವಾಗಿ ಸರ್ವಪಕ್ಷ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...