ವಿಜಯಪುರ : ಸಿಎಂ ಸಿದ್ದರಾಮಯ್ಯ ಟಿಪ್ಪುವಿನ 2 ನೇ ಅವತಾರ, ಅವರು ಎರಡನೇ ಟಿಪ್ಪು ಸುಲ್ತಾನ್’ ಆಗ್ತಿದ್ದಾರೆ ಎಂದು ಬಿಜೆಪಿ ಶಾಸಕ ಯತ್ನಾಳ್ ಕಿಡಿಕಾರಿದ್ದಾರೆ.
ಹಿಜಾಬ್ ವಿವಾದದ ಕುರಿತು ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಜಾಬ್ ಧರಿಸಿ ಬರೋದಾದ್ರೆ, ನಾಳೆ ಹಿಂದೂಗಳು ಕೇಸರಿ ಶಾಲು, ಹಣೆಗೆ ತಿಲಕ ಇಟ್ಟುಕೊಂಡು ಬರುತ್ತಾರೆ. ಇದರಿಂದ ದೊಡ್ಡ ಸಂಘರ್ಷ ಉಂಟಾಗುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಟಿಪ್ಪು ಸುಲ್ತಾನ ಆಗುತ್ತಿದ್ದಾರೆ. ಹಿಜಾಬ್ ನಿಷೇಧ ಹಿಂತೆಗೆದುಕೊಳ್ಳುವುದು ಸೂಕ್ತ ಅಲ್ಲ . ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಸ್ಲಿಮರ ಪುಷ್ಟೀಕರಣಕ್ಕೆ ಸಿದ್ದರಾಮಯ್ಯ ನಿಂತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಒಂದು ವರ್ಗದ ಓಲೈಕೆಗೆ ಸಿದ್ದರಾಮಯ್ಯ ಮುಂದಾಗಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.