ಬೆಂಗಳೂರು: ರಾಜ್ಯದ 4 ಸಾರಿಗೆ ನಿಗಮಗಳಿಗೆ 5,675 ಹೊಸ ಬಸ್ ಗಳ ಖರೀದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಅಪಾರ ಸ್ಪಂದನೆ ವ್ಯಕ್ತವಾಗಿದೆ. ಸಾರ್ವಜನಿಕರಿಂದ ಯೋಜನೆಗೆ ಮೆಚ್ಚುಗೆ ವ್ಯಕ್ತವಾಗಿದೆ. ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣಿಕರ ಸಂಖ್ಯೆ ಶೇಕಡ 15 ರಷ್ಟು ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಸಾರಿಗೆ ಸಂಸ್ಥೆಗಳನ್ನು ಸದೃಢಗೊಳಿಸಲು 5675 ಬಸ್ ಖರೀದಿಸಲು ಉದ್ದೇಶಿಸಲಾಗಿದೆ.
ಇದಕ್ಕಾಗಿ ಸೂಕ್ತ ಯೋಜನೆ ರೂಪಿಸಿರುವಂತೆ ಸಿಎಂ ಸಿದ್ದರಾಮಯ್ಯ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೆಚ್ಚುವರಿ ಬಸ್ ಸೇವೆ ನೀಡಲು ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒತಗಿಸಲು ನಿಗಮಗಳು ಕೆಲಸ ಮಾಡಬೇಕು ಎಂದು ಸಿಎಂ ಹೇಳಿದ್ದಾರೆ.
ಪ್ರಸಕ್ತ ಬಜೆಟ್ ನಲ್ಲಿ ಹೊಸ ಬಸ್ ಗಳ ಖರೀದಿಗೆ 500 ಕೋಟಿ ಒದಗಿಸಿದ್ದು, 1000 ಬಸ್ ಗಳನ್ನು ಖರೀದಿಸಲಾಗುವುದು. ನಾಲ್ಕು ಸಾರಿಗೆ ನಿಗಮಗಳಿಗೆ 5675 ಹೊಸ ಬಸ್ ಖರೀದಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.