ಬೆಂಗಳೂರು :, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದಲ್ಲಿ ಭಾಗಿಯಾದರು.
ಕ್ಷೇತ್ರದ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ, ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್, ಕೃಷಿ ಸಚಿವರಾದ ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ್, ಹಣಮಂತ ನಿರಾಣಿ, ಬಸವನಗೌಡ ಆರ್ ಪಾಟೀಲ್, ಸುನೀಲಗೌಡ ಬಿ ಪಾಟೀಲ, ಪೊ.ಹೆಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ ಪಾಟೀಲ ಹಾಗೂ ಕಾಂತಾ ನಾಯಕ್, ವಿದ್ಯಾರಾಣಿ ತುಂಗಲ್ ಸೇರಿದಂತೆ ಹಲವು ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.