ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ನಂದಿನಿ ಬ್ಯಾಂಡ್ ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆಗೊಳಿಸಿದರು.
ಹೌದು, ಸಿಎಂ ಸಿದ್ದರಾಮಯ್ಯ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ಯಾಂಡ್ ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್ ರಾಯಭಾರಿ ಶಿವರಾಜ್ ಕುಮಾರ್ ಅವರು ಜಾಹಿರಾತು ಬಿಡುಗಡೆಗೊಳಿಸಿದರು. ಸಮಾರಂಭದಲ್ಲಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್, ಸಚಿವ ಮಧು ಬಂಗಾರಪ್ಪ, ಕೆ.ಎಂ.ಎಫ್ ಅಧ್ಯಕ್ಷ ಭೀಮಾ ನಾಯ್ಕ್ ಮೊದಲಾದವರು ಉಪಸ್ಥಿತರಿದ್ದರು.