ಬೆಂಗಳೂರು : ತುಮಕೂರಿನ ಮಧುಗಿರಿಯಲ್ಲಿ 145 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ರಾಜ್ಯದಲ್ಲಿ ಕ್ಷೀರಭಾಗ್ಯ ಯೋಜನೆ ಜಾರಿಯಾಗಿ ಹತ್ತು ವರ್ಷ ಪೂರೈಸಿದ್ದು, ಕಾರ್ಯಕ್ರಮ ಉದ್ಘಾಟಿಸಲು ಸಿದ್ದರಾಮಯ್ಯ ತುಮಕೂರಿಗೆ ಆಗಮಿಸಿದ್ದಾರೆ. ಹೌದು. ಕ್ಷೀರಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಹಿನ್ನೆಲೆಯಲ್ಲಿ ಮಧುಗಿರಿಯಲ್ಲಿ ರಾಜ್ಯಮಟ್ಟದ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದೆ.
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದು, ಇದೇ ವೇಳೆ 145 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.ವೇದಿಕೆಯಲ್ಲಿ ಬಟನ್ ಒತ್ತುವ ಮೂಲಕ ಸಿಎಂ ಸಿದ್ದರಾಮಯ್ಯನವರು ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಚಿವರು, ವಿವಿಧ ಶಾಸಕರು ಉಪಸ್ಥಿತರಿದ್ದರು.