ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.
ದೆಹಲಿಯ ರಾಹುಲ್ ಗಾಂಧಿ ನಿವಾಸದಲ್ಲಿ ಸಿಎಂ ಭೇಟಿಯಾಗಿದ್ದು, ಉಭಯ ನಾಯಕರು ಪ್ರತ್ಯೇಕವಾಗಿ 10 ನಿಮಿಷ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರ ನಡುವೆ ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಮತ್ತು ಸಿಎಂ ಬದಲಾವಣೆ ಬಗ್ಗೆ ಚರ್ಚೆ ಸೇರಿ ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆದಿದೆ.
ಇದೇ ಸಂದರ್ಭದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಸಚಿವರಾದ ಕೆ.ಜೆ. ಜಾರ್ಜ್, ಡಾ. ಜಿ. ಪರಮೇಶ್ವರ್, ಡಾ. ಹೆಚ್.ಸಿ. ಮಹಾದೇವಪ್ಪ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರಾದ ದರ್ಶನ್ ದ್ರುವನಾರಾಯಣ್, ಅನಿಲ್ ಚಿಕ್ಕಮಾದು, ಹರೀಶ್ ಗೌಡ, ಗಣೇಶ್ ಪ್ರಸಾದ್ ಉಪಸ್ಥಿತರಿದ್ದರು.