alex Certify ಕಾಂಗ್ರೆಸ್ ಶಾಸಕರ ಅಸಮಾಧಾನ ತಣಿಸಲು ಇಂದಿನಿಂದ ಮತ್ತೆ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಂಗ್ರೆಸ್ ಶಾಸಕರ ಅಸಮಾಧಾನ ತಣಿಸಲು ಇಂದಿನಿಂದ ಮತ್ತೆ ಸಭೆ

ಬೆಂಗಳೂರು: ಕಾಂಗ್ರೆಸ್ ಶಾಸಕರ ಅಹವಾಲು ಆಲಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇತ್ತೀಚೆಗೆ ಮೂರು ದಿನ ಸತತವಾಗಿ ಜಿಲ್ಲಾ ಮಟ್ಟದ ಶಾಸಕರು, ಸಚಿವರ ಸಭೆ ನಡೆಸಿದ್ದರು.

ಬುಧವಾರದಿಂದ ಮತ್ತೆ ಜಿಲ್ಲಾ ಮಟ್ಟದ ಸಭೆಗೆ ಚಾಲನೆ ನೀಡಲಾಗುತ್ತದೆ. ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮೂರು ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಗಳ ಸಚಿವರು ಹಾಗೂ ಕಾಂಗ್ರೆಸ್ ಶಾಸಕರೊಂದಿಗೆ ಸಿಎಂ ಚರ್ಚೆ ನಡೆಸಲಿದ್ದಾರೆ.

ಬೆಂಗಳೂರು ನಗರ ಜಿಲ್ಲೆ, ಕೋಲಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಕಾರ್ಯಗಳು, ಅನುದಾನ ಮೊದಲಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಸರ್ಕಾರಿ ಅಧಿಕಾರಿಗಳ ವರ್ಗಾವಣೆಯಲ್ಲಿ ಸ್ಥಳೀಯ ಶಾಸಕರನ್ನು ಪರಿಗಣಿಸುತ್ತಿಲ್ಲ. ಸಚಿವರು ತಮ್ಮನ್ನು ಕಡೆಗಣಿಸುತ್ತಿದ್ದಾರೆ ಹಾಗೂ ಅನುದಾನ ಬಿಡುಗಡೆಯಾಗಿಲ್ಲ ಎಂಬುದರ ಬಗ್ಗೆ ಕಾಂಗ್ರೆಸ್ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಸಿಎಂ ಜಿಲ್ಲಾವಾರು ಸಭೆ ನಡೆಸಿ ಶಾಸಕರ ಅಹವಾಲು ಆಲಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...