
ಬೆಂಗಳೂರು: ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಮರು ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ನಿರಂತರ ಹೋರಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಫೆಬ್ರವರಿ 28ರಂದು ಸಭೆ ಕರೆದಿದ್ದಾರೆ.
ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಫೆಬ್ರವರಿ 28ರಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಳೆ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ. ಸಭೆಯಲ್ಲಿ ನೌಕರರ ಬೇಡಿಕೆ ಬಗ್ಗೆ ಚರ್ಚೆ ನಡೆಸಲಿದ್ದು, ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.