
ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ನಾಸಿರ್ ಹುಸೇನ್ ಜಯಗಳಿಸಿದ ನಂತರ ವಿಧಾನಸೌಧದಲ್ಲಿ ಸಂಭ್ರಮಾಚರಣೆ ಸಂದರ್ಭದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ದಾಖಲೆ ಒಳಗೊಂಡು ಎಲ್ಲಾ ಮಾಹಿತಿಗಳೊಂದಿಗೆ ಭೇಟಿ ಮಾಡಲು ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ. ಬಿಗಿ ಭದ್ರತೆ ಇರುವ ವಿಧಾನಸೌಧಕ್ಕೆ ನಾಸಿರ್ ಹುಸೇನ್ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಪ್ರವೇಶ ಪಡೆದಿದ್ದಾದರೂ ಹೇಗೆ ಎನ್ನುವ ಬಗೆಯು ಸಿಎಂ ಮಾಹಿತಿ ಬಯಸಿದ್ದಾರೆ ಎನ್ನಲಾಗಿದೆ.