
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಜಾರಿ, ಬರ ಪರಿಸ್ಥಿತಿಯಿಂದ ಎದುರಾದ ಸಮಸ್ಯೆಗಳು ಸೇರಿ ಸರ್ಕಾರದ ಕಾರ್ಯಕ್ರಮಗಳ ಅನುಷ್ಟಾನದ ಪ್ರಗತಿ ಪರಿಶೀಲಿಸುವ ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಜಾರಿಯಾಗಿರುವ ಗ್ಯಾರಂಟಿ ಯೋಜನೆಗಳ ಪ್ರಗತಿ, ಅನುಷ್ಠಾನದಲ್ಲಿ ಲೋಪ ಆಗಿದೆಯೇ ಎಂಬುದರ ಬಗ್ಗೆ ಸಿಎಂ ಮಾಹಿತಿ ಪಡೆದುಕೊಳ್ಳಲಿದ್ದಾರೆ. ಅಲ್ಲದೇ, ಜಿಲ್ಲಾಮಟ್ಟದಲ್ಲಿ ಬರ ಪರಿಸ್ಥಿತಿ, ಸಮಸ್ಯೆಗಳ ನಿವಾರಣೆಗೆ ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಲಿದ್ದು, ಸರ್ಕಾರದ ಇತರೆ ಕಾರ್ಯಕ್ರಮಗಳು, ಅನುಷ್ಠಾನ, ಬಜೆಟ್ ನಲ್ಲಿ ಘೋಷಿಸಿದ ಯೋಜನೆಗಳ ಅನುಷ್ಠಾನದ ಬಗ್ಗೆ ಮಾಹಿತಿ ಪಡೆಯಲಿದ್ದಾರೆ,