ಬೆಂಗಳೂರು : ಗಣಿಧಣಿ ಜನಾರ್ಧನ ರೆಡ್ಡಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದು, ಗಣಿಧಣಿ ರಾಜಕೀಯ ನಡೆ ಬಹಳ ಕುತೂಹಲ ಮೂಡಿಸಿದೆ.
ಇತ್ತೀಚೆಗಷ್ಟೇ ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ ರೆಡ್ಡಿ ಇದೀಗ ಜನಾರ್ಧನ ರೆಡ್ಡಿ ಇದೀಗ ಧಿಡೀರ್ ಆಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ್ದು, ಬಹಳ ಕುತೂಹಲ ಮೂಡಿಸಿದೆ.
ಇಂದು ಸಿಎಂ ಸಿದ್ದರಾಮಯ್ಯರ ಕಾವೇರಿ ನಿವಾಸಕ್ಕೆ ತೆರಳಿದ ರೆಡ್ಡಿ ಚುನಾವಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಶಿವರಾಜ್ ತಂಗಡಗಿ ಉಪಸ್ಥಿತರಿದ್ದರು.
ನಂತರ ಮಾತನಾಡಿದ ಜನಾರ್ಧನ ರೆಡ್ಡಿ ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವಂತೆ ಎಲ್ಲರೂ ಮನವಿ ಮಾಡಿದ್ದಾರೆ. ಯಾರಿಗೆ ಮತ ಹಾಕಬೇಕು ಎಂಬ ಬಗ್ಗೆ ಇನ್ನು ತೀರ್ಮಾನ ಮಾಡಿಲ್ಲ ಎಂದು ಹೇಳಿದರು. ಗಣಿಧಣಿ ರಾಜಕೀಯ ನಡೆ ಬಹಳ ಕುತೂಹಲ ಮೂಡಿಸಿದೆ.