
ಬೆಂಗಳೂರು: ಎಲ್ಲಾ ಗ್ಯಾರಂಟಿ ಯೋಜನೆಗಳಿಗೆ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೂ ಶೀಘ್ರವೇ ಹಣ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಸಿಎಂ, ಗೃಹಲಕ್ಷ್ಮಿ ಯೋಜನೆಯ ಹಣ ಜನವರಿಯಿಂದ ಕೊಡಬೇಕಿದ್ದು, ಶೀಘ್ರವೇ ಅದನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಹಾಲು ಉತ್ಪಾದಕ ರೈತರಿಗೆ 7 ರೂಪಾಯಿ ಹಾಲಿನ ಪ್ರೋತ್ಸಾಹ ಧನ ನೀಡಲಾಗುವುದು. 2026- 27 ನೇ ಸಾಲಿಗೆ 7 ರೂ. ಹಾಲಿನ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದ್ದಾರೆ.