alex Certify ಇಬ್ಬರು ಸಚಿವರಿಗೆ ಸಿಎಂ ಸಿದ್ಧರಾಮಯ್ಯ ಬಳಿ ಇದ್ದ ಖಾತೆ ಮರು ಹಂಚಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಬ್ಬರು ಸಚಿವರಿಗೆ ಸಿಎಂ ಸಿದ್ಧರಾಮಯ್ಯ ಬಳಿ ಇದ್ದ ಖಾತೆ ಮರು ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದ ಖಾತೆಗಳ ಮರು ಹಂಚಿಕೆ ಮಾಡಲಾಗಿದೆ. ಐಟಿ ಬಿಟಿ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಖಾತೆಗಳನ್ನು ಇಬ್ಬರು ಸಚಿವರಿಗೆ ಮರುಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಐಟಿಬಿಟಿ ಖಾತೆಯನ್ನು ನೀಡಲಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಮೂಲ ಸೌಕರ್ಯ ಅಭಿವೃದ್ಧಿ ಖಾತೆಯನ್ನು ಮರುಹಂಚಿಕೆ ಮಾಡಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಬಳಿ ಹಣಕಾಸು, ಡಿಪಿಐಆರ್, ಗುಪ್ತಚರ, ಕ್ಯಾಬಿನೆಟ್ ವ್ಯವಹಾರಗಳು, ಮಾಹಿತಿ ಮತ್ತು ಹಂಚಿಕೆಯಾಗದ ಇಲಾಖೆಗಳ ಖಾತೆಗಳಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...