
ಹಾಸನ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಅವರ ಪುತ್ರ ಮಾಜಿ ಶಾಸಕ ಡಾ. ಯತೀಂದ್ರ ಹೇಳಿದ್ದಾರೆ.
ಹಾಸನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯದಲ್ಲಿ ಚುನಾವಣೆ ಎದುರಿಸಲಿದ್ದು, ಹೆಚ್ಚು ಸ್ಥಾನ ಗೆದ್ದರೆ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಹೇಳಿದ್ದಾರೆ.
ಚುನಾವಣೆಗೂ ಮೊದಲು ಘೋಷಿಸಿದ್ದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಬಡವರು, ಶೋಷಿತರಿಗೆ ಕೆಲಸ ಮಾಡುವ ಹಂಬಲ ಕಾಂಗ್ರೆಸ್ ಗೆ ಇದ್ದು, ಎಲ್ಲರೂ ಸಿದ್ದರಾಮಯ್ಯನವರಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಿದರೆ ಸಿದ್ದರಾಮಯ್ಯನವರಿಗೆ ಮತ್ತಷ್ಟು ಬೆಂಬಲ ಸಿಗಲಿದೆ. ಗ್ಯಾರಂಟಿ ಯೋಜನೆಗಳಿಗೆ ವರ್ಷಕ್ಕೆ 56,000 ಕೋಟಿ ರೂ. ಖರ್ಚಾಗಲಿದ್ದು, ರಾಜ್ಯದಲ್ಲಿ ಯಾವ ಸರ್ಕಾರವು ಇಷ್ಟು ಹಣ ಖರ್ಚು ಮಾಡಿಲ್ಲ. ಇಷ್ಟು ಹಣ ಖರ್ಚು ಮಾಡುತ್ತಿರುವಾಗ ಜನರ ಬೆಂಬಲ ಬೇಕು. ಆಗ ಸಿದ್ದರಾಮಯ್ಯ 5 ವರ್ಷ ಗ್ಯಾರಂಟಿ ಯೋಜನೆ ಮುಂದುವರೆಸುತ್ತಾರೆ ಎಂದು ಹೇಳಿದ್ದಾರೆ.