ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಾಜು 300 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.
142 ಸ್ಥಿರಾಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಇಕೊಂಡಿದೆ. ಏಜೆಂಟ್ ಗಳಾಗಿ ಕೆಲಸ ಮಾಡುವವರ ಹೆಸರಿನಲ್ಲಿಯೂ ನಿವೇಶನ ನೋಂದಣಿಯಾಗಿದ್ದವು. ಪ್ರಕರಣ ಸಂಬಂಧ ಇಡೀ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 300 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. ಮೈಸೂರಿನ ಗಂಗರಾಜು, ಸ್ನೇಹಮಯಿ ಕೃಷ್ಣ ದೂರು ನೀಡಿದ್ದರು. ಅವರ ದೂರಿನ ಅನ್ವಯ ಇಡಿ ತನಿಖೆ ನಡೆಸಿದ್ದು, ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಇಡಿ ತಾತ್ಕಾಲಿಕವಾಗಿ ಪಿಎಂಎಲ್‌ಎ 2002 ರ ನಿಬಂಧನೆಗಳ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾದ 300 ಕೋಟಿ ರೂ.(ಅಂದಾಜು) ಮಾರುಕಟ್ಟೆ ಮೌಲ್ಯದ 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ ಎಂದು ಇಡಿ ತಿಳಿಸಿದೆ.
ED, Bangalore has provisionally attached 142 immovable properties having market value of Rs. 300 Crore (approx.) registered in the name of various individuals who are working as real-estate businessmen and agents under the provisions of the PMLA, 2002, in connection with the case…
— ED (@dir_ed) January 17, 2025