
ಮಂಡ್ಯ: ನುಡಿದಂತೆ ನಡೆದು ನಮ್ಮ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಗ್ಯಾರಂಟಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ, ನರೇಂದ್ರ ಸ್ವಾಮಿಯವರು ಉತ್ತಮ ಕೆಲಸ ಮಾಡಿದ್ದಾರೆ. ಮುಂದೆ ಅವರಿಗೆ ಅವಕಾಶ ಸಿಕ್ಕರೆ ಮಂತ್ರಿಗಿರಿ ನೀಡುತ್ತೇವೆ ಎಂದು ಹೇಳಿದ್ದಾರೆ.
ನರೇಂದ್ರಸ್ವಾಮಿ ಎಲ್ಲಾ ಸಚಿವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಅನೇಕ ಯೋಜನೆಗಳನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಸಂಪುಟ ಪುನಾರಚನೆಯಲ್ಲಿ ನರೇಂದ್ರ ಸ್ವಾಮಿಯವರಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ.