ವಿಜಯಪುರ : ಸಿಎಂ ಸಿದ್ದರಾಮಯ್ಯ ಇಂದು ಕೃಷ್ಣಾ ನದಿಗೆ ಗಂಗಾಪೂಜೆ ಹಾಗೂ ಬಾಗಿನ ಅರ್ಪಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯಅವರು ಇಂದು ಆಲಮಟ್ಟಿ ಬಳಿ ಕೃಷ್ಣಾ ನದಿಗೆ ನಿರ್ಮಿಸಲಾದ ಅಣೆಕಟ್ಟಿನಲ್ಲಿ ಬಾಗಿನ ಅರ್ಪಿಸಿದ್ದಾರೆ. ಈ ವೇಳೆ ಸಚಿವ ಎಂ.ಬಿ.ಪಾಟೀಲ್ ಮತ್ತಿತರಿದ್ದರು.
ನಂತರ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಸಚಿವರು ಸಭೆ ನಡೆಸುತ್ತಿದ್ದಾರೆ. . ಕೃಷ್ಣ ಮೇಲ್ದಂಡೆ ಯೋಜನೆ 3 ರ ಭೂಸ್ವಾಧೀನ, ಪುನರ್ವಸತಿ ಹಾಗೂ ಪುನರ್ ನಿರ್ಮಾಣ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ. ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ.ಮಲೆನಾಡು ಭಾಗದಲ್ಲಿ ಬಿಸಿಲಿನ ಕಾವು ಜೋರಿದೆ. ಮಳೆಗಾಗಿ ರೈತರು ಆಕಾಶದತ್ತ ಮುಖ ನೋಡುತ್ತಿದ್ದಾರೆ.