alex Certify ‘ಮುಸ್ಲಿಂ’ ಸಮುದಾಯದ ಟೋಪಿ, ಶಾಲು ಧರಿಸಿ ಬಕ್ರೀದ್ ನಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ |Photo Viral | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮುಸ್ಲಿಂ’ ಸಮುದಾಯದ ಟೋಪಿ, ಶಾಲು ಧರಿಸಿ ಬಕ್ರೀದ್ ನಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ |Photo Viral

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ‘ಮುಸ್ಲಿಂ’ ಸಮುದಾಯದ ಟೋಪಿ, ಶಾಲು ಧರಿಸಿ ಬಕ್ರೀದ್ ನಲ್ಲಿ ಭಾಗಿಯಾಗಿದ್ದಾರೆ.

ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಿಎಂ ಸಿದ್ದರಾಮಯ್ಯ ಮುಸ್ಲಿಂ ಭಾಂದವರನ್ನುದ್ದೇಶಿಸಿ ಮಾತನಾಡಿದರು.

ಎಲ್ಲಾ ಮುಸಲ್ಮಾನ ಬಾಂಧವರಿಗೆ ಬಕ್ರೀದ್ ಶುಭಾಶಯಗಳು. ಎಲ್ಲರೂ ಇಂದು ಭಕ್ತಿಯಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿ ಮನುಕುಲಕ್ಕೆ ಒಳಿತಾಗಲಿ ಎಂದು ಪ್ರಾರ್ಥಿಸಿದ್ದೀರಿ. ಎಲ್ಲರೂ ಸಾಮೂಹಿಕ ಪ್ರಾರ್ಥನೆ ಮಾಡಿದ್ದು, ಸಮಾಜದಲ್ಲಿ ನಾವೆಲ್ಲರೂ ಅಣ್ಣತಮ್ಮಂದಿರ ಹಾಗೆ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳಬೇಕು. ಭಾರತ ಬಹುತ್ವದ ದೇಶ. ಎಲ್ಲಾ ಧರ್ಮ, ಜಾತಿ, ಭಾಷೆ, ಪ್ರಾಂತ್ರ್ಯದವರು ಒಟ್ಟಾಗಿ ಬಾಳಬೇಕು. ಮನುಷ್ಯತ್ವ ಬಹಳ ದೊಡ್ಡದು. ಎಲ್ಲರೂ ಪರಸ್ಪರ ಪ್ರೀತಿಸಬೇಕು. ಪ್ರತಿಯೊಬ್ಬರೂ ಸಹಿಷ್ಣುತೆಯನ್ನು ಪಾಲಿಸಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಹಾಗೆ ಬೆಳೆದಾಗ ಮಾತ್ರ ರಾಷ್ಟ್ರ, ಸಮಾಜ ಹಾಗೂ ಎಲ್ಲಾ ಧರ್ಮಗಳೂ ಏಳಿಗೆಯಾಗುತ್ತವೆ. ನಮ್ಮದು ಸರ್ವಧರ್ಮ ಸಮನ್ವಯದಲ್ಲಿ, ಸಂವಿಧಾನದಲ್ಲಿ ನಂಬಿಕೆ ಇಟ್ಟಿರುವ ಸರ್ಕಾರ. ಸಂವಿಧಾನ ಹೇಳುವಂತೆ ನಡೆದುಕೊಳ್ಳುತ್ತೇವೆ. ಯಾವುದೇ ತಾರತಮ್ಯ ಮಾಡುವುದಿಲ್ಲ. ಕರ್ನಾಟಕದ ಏಳು ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಈ ಕೆಲಸವನ್ನು ತಾರತಮ್ಯವಿಲ್ಲದೆ ಮಾಡುತ್ತೇವೆ. ಅಲ್ಪಸಂಖ್ಯಾತರು ಕೂಡ ಯಾವುದೇ ಕಾರಣಕ್ಕೂ ಭಯ ಆತಂಕ ಪಡಬೇಕಾದ ಅಗತ್ಯವಿಲ್ಲ. ನಮ್ಮಸರ್ಕಾರದಲ್ಲಿ ಅಲ್ಪಸಂಖ್ಯಾತರು, ಬಹುಸಂಖ್ಯಾತರಿಗೆ ಒಂದೇ ರೀತಿಯಲ್ಲಿ ರಕ್ಷಣೆ ಕೊಡುವ ಕೆಲಸ ಮಾಡುತ್ತೇವೆ. ಎಲ್ಲಕ್ಕಿಂತ ಮುಖ್ಯವಾಗಿ ನಾಡಿನ ಅಭಿವೃದ್ಧಿಗೆ ಒಳ್ಳೆ ಮಳೆ ಬೆಳೆಯಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...