ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಭೂ ಸುಧಾರಣಾ ಕಾಯ್ದೆ- 2020ಕ್ಕೆ ತಿದ್ದುಪಡಿ ತರಲಾಗುವುದು ಎಂದು ʼಪ್ರೊ.ಎಂಡಿಎನ್ ನೆನಪುʼ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಭೂ ಸುಧಾರಣಾ ಕಾಯ್ದೆ 2020ಕ್ಕೆ ತಿದ್ದುಪಡಿ ತರುವಂತೆ ರೈತರಿಂದ ಬೇಡಿಕೆ ಇದ್ದು, ಸದ್ಯದಲ್ಲೇ ಆ ಕಾಯ್ದೆಗೆ ತಿದ್ದುಪಡಿ ತರಲಾಗುವುದು. ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಸೇರಿ ರೈತ ಸಂಘ ಮಂಡಿಸಿರುವ ಎಲ್ಲಾ ಹಕ್ಕೊತ್ತಾಯಗಳ ಬಗ್ಗೆ ಪರಿಶೀಲನೆ ನಡೆಸಿ ಈಡೇರಿಸಲು ಪ್ರಯತ್ನಿಸಲಾಗುತ್ತದೆ. ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.