ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ವ್ಯಕ್ತಿಯನ್ನು ಸುರತ್ಕಲ್ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಮೂಲತಃ ಶಿರಸಿ ತಾಲೂಕಿನ ಅಜ್ಜರಾನಿ ಗ್ರಾಮದ ಅನಿಲ್ ಕುಮಾರ್(34) ಬಂಧಿತ ಆರೋಪಿ. ಮೂರು ತಿಂಗಳಿನಿಂದ ಪಡಿತರ ಚೀಟಿ ಪಡೆದುಕೊಳ್ಳಲು ಅನಿಲ್ ಕುಮಾರ್ ಪ್ರಯತ್ನ ನಡೆಸಿದ್ದು, ಪಡಿತರ ಚೀಟಿ ಸಿಗದ ಕಾರಣ ಕೋಪಗೊಂಡು ಮುಖ್ಯಮಂತ್ರಿಗಳನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದನ್ನು ಗಮನಿಸಿದ ಸುಹಾನ್ ಆಳ್ವ ಎಂಬುವರು ಪೊಲೀಸರಿಗೆ ದೂರು ನೀಡಿದ್ದು, ಕ್ರಮ ಕೈಗೊಂಡ ಪೊಲೀಸರು ಅನಿಲ್ ಕುಮಾರ್ ಅವರನ್ನು ಬಂಧಿಸಿದ್ದಾರೆ.