ಬೆಂಗಳೂರು : ಗ್ಯಾರಂಟಿ ಯೋಜನೆಗಳು : ಬಡವರ ಸುರಕ್ಷತೆ ಮತ್ತು ಕಲ್ಯಾಣ” ಎಂಬ ಕೃತಿಯನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಇಂದು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ “ಗ್ಯಾರಂಟಿ ಯೋಜನೆಗಳು: ಬಡವರ ಸುರಕ್ಷತೆ ಮತ್ತು ಕಲ್ಯಾಣ” ಕೃತಿ ಬಿಡುಗಡೆಗೊಳಿಸಿ, ಸಂವಾದದಲ್ಲಿ ಪಾಲ್ಗೊಂಡು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ.
ಡಾ.ಡಿ.ಶ್ರೀನಿವಾಸ ಮಣಗಳ್ಳಿ ಅವರ ಸಂಪಾದನಾ ಕೃತಿ ಬಿಡುಗಡೆಯ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆ, ವಿಧಾನ ಪರಿಷತ್ ಸದಸ್ಯರಾದ ಡಾ.ತಿಮ್ಮಯ್ಯ, ನಾಟಕಕಾರರಾದ ಕೆ.ವೈ.ನಾರಾಯಣಸ್ವಾಮಿ, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿ ನಿರ್ದೇಶಕರಾದ ಪ್ರೊ.ಎಂ.ಚಂದ್ರ ಪೂಜಾರಿ, ಕುಲಪತಿಗಳಾದ ಪ್ರೊ.ಎನ್.ಕೆ.ಲೋಕನಾಥ್, ಸಾಮಾಜಿಕ ಕಾರ್ಯಕರ್ತರಾದ ಅಹಿಂದ ಜವರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.