ಬೆಂಗಳೂರು: ಬೋಯಿಂಗ್ ನೂತನ ಕ್ಯಾಂಪಸ್ ಉದ್ಘಾಟನೆಗೆ ರಾಜ್ಯಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಾಜ್ಯದ ಬರ ವಿಚಾರ ನೆನಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಈ ವರ್ಷ ತೀವ್ರ ಬರ ಪರಿಸ್ಥಿತಿ ಇದ್ದು, ರೈತರಿಗೆ ಪರಿಹಾರ ನೀಡಲು ಅನುದಾನ ಬಿಡುಗಡೆ ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಆದಷ್ಟು ಬೇಗನೆ ಬರ ಪರಿಹಾರ ಬಿಡುಗಡೆ ಮಾಡಬೇಕೆಂದು ವೇದಿಕೆ ಕಾರ್ಯಕ್ರಮದ ವೇಳೆ ಸಿಎಂ ಮನವಿ ಮಾಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ ಅವರು, ಮನವಿ ನೀಡಿರುವುದು ನನ್ನ ಗಮನದಲ್ಲಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.