
ದಾವಣಗೆರೆ: ಮುಂದಿನ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಹಳ ದಿನ ಉಳಿಯುವುದೇ ಇಲ್ಲ ಎನ್ನುವ ಗ್ಯಾರಂಟಿ ಸ್ವತಃ ಸಿದ್ದರಾಮಯ್ಯನವರಿಗೆ ಇದೆ. ಹೀಗಾಗಿ ಮುಂದಿನ ಅಧಿವೇಶನದ ಒಳಗೆ ಅವರು ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ 16 ತಿಂಗಳಲ್ಲಿ ಮುಡಾ, ವಾಲ್ಮೀಕಿ, ಕಾರ್ಮಿಕ ಇಲಾಖೆ, ಲಿಕ್ಕರ್ ಸೇರಿದಂತೆ 16 ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಧಿವೇಶನದಲ್ಲಿ ಸರ್ಕಾರದ ಎಲ್ಲಾ ಭ್ರಷ್ಟಾಚಾರ, ಹಗರಣಗಳನ್ನು ಪ್ರಸ್ತಾಪಿಸಿ ಬಯಲಿಗೆಳೆಯಲಾಗುವುದು ಎಂದು ಹೇಳಿದ್ದಾರೆ.