ಬೆಂಗಳೂರು: ಕಳೆದ ಮೂರು ವಾರಗಳಿಂದ ನಿರಂತರ ಪ್ರವಾಸ, ಕಾರ್ಯಕ್ರಮಗಳ ಒತ್ತಡದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ದಿನವಿಡೀ ವಿಶ್ರಾಂತಿ ಮೊರೆ ಹೋಗಿದ್ದಾರೆ. ಭಾನುವಾರ ಸಂಜೆ ಸಾರಿಗೆ ಇಲಾಖೆ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಕಳೆದ ಡಿಸೆಂಬರ್ 9 ರಿಂದ ಬೆಳಗಾವಿಯಲ್ಲಿ ಆರಂಭವಾದ ವಿಧಾನ ಮಂಡಲ ಅಧಿವೇಶನ, ಕಾಂಗ್ರೆಸ್ ಕಾರ್ಯಕಾರಿಣಿ ಸಭೆ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ದೆಹಲಿ ಪ್ರವಾಸ ಒಳಗೊಂಡಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುವಿಲ್ಲದ ಕಾರ್ಯಕ್ರಮಗಳ ಒತ್ತಡದಿಂದಾಗಿ ದಣಿದಿದ್ದಾರೆ.
ಹೀಗಾಗಿ ಜನವರಿ 2ರವರೆಗೂ ಸಿಎಂ ಸಿದ್ಧರಾಮಯ್ಯ ಅವರು ವಿರಾಮದಲ್ಲಿ ಇರಲಿದ್ದು, ಅವರು ಯಾವುದೇ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿಲ್ಲ. ದೀರ್ಘ ವಿಶ್ರಾಂತಿಯ ನಂತರ ಹೊಸ ವರ್ಷದಲ್ಲಿ ಮುಂದಿನ ಶುಕ್ರವಾರದಿಂದ ಇಲಾಖಾವಾರು ಪ್ರಗತಿ ಪರಿಶೀಲನೆ ಮತ್ತು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.