ಬೆಂಗಳೂರು: ಗ್ರಾಮಗಳ ವ್ಯಾಜ್ಯಗಳನ್ನು ಗ್ರಾಮಗಳಲ್ಲಿ ಬಗೆಹರಿಸಬೇಕು ಎನ್ನುವ ಮಹತ್ವಾಕಾಂಕ್ಷೆಯಿಂದ ಗ್ರಾಮ ನ್ಯಾಯಾಲಯಗಳ ಸ್ಥಾಪನೆ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಮ್ಮಿಕೊಂಡಿದ್ದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ, ಸ್ವಚ್ಛ ಸರ್ವೇಕ್ಷಣಾ ರಾಜ್ಯಮಟ್ಟದ ಪ್ರಶಸ್ತಿ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಗ್ರಾಮ ನ್ಯಾಯಾಲಯ ವ್ಯವಸ್ಥೆ ಜಾರಿ ಮಾಡಲು ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ರಾಜೀವ್ ಗಾಂಧಿಯವರ ಗ್ರಾಮ ಸ್ವರಾಜ್ಯ ಮತ್ತು ಅಧಿಕಾರ ವಿಕೇಂದ್ರೀಕರಣದ ಆಶಯದಂತೆ ಗ್ರಾಮ ನ್ಯಾಯಾಲಯಗಳು ಸ್ಥಾಪನೆಯಾದಲ್ಲಿ ಗ್ರಾಮೀಣ ಜನತೆಗೆ ಅನುಕೂಲವಾಗಲಿದೆ. ಗಾಂಧೀಜಿಯವರ ಆಶಯದಂತೆ ರಾಜೀವ್ ಗಾಂಧಿ ಅಧಿಕಾರ ವಿಕೇಂದ್ರೀಕರಣಕ್ಕೆ ಮುನ್ನುಡಿ ಬರೆದು ಸಂವಿಧಾನಕ್ಕೆ ತಿದ್ದುಪಡಿ ತಂದರು. ಪಿ.ವಿ. ನರಸಿಂಹರಾವ್ ಇದನ್ನು ಜಾರಿ ಮಾಡಿದರು ಎಂದು ಹೇಳದ್ದಾರೆ.
ಗ್ರಾಮೋದ್ಯೋಗ ಉತ್ಪನ್ನಗಳಿಗೆ ಮಾರುಕಟ್ಟೆ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದು. ಖಾದಿ, ಗ್ರಾಮೋದ್ಯಗಗಳ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.