ಬೆಂಗಳೂರು : ನಿನ್ನೆಯಿಂದ 15ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧ ಮುಂಭಾಗದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಲನಚಿತ್ರೋತ್ಸವ ಉದ್ಘಾಟಿಸಿದ್ದಾರೆ.
ಹಾಗೂ ಚಲನಚಿತ್ರೋತ್ಸವದ ರಾಯಭಾರಿಯಾಗಿ ನಟ ಡಾಲಿ ಧನಂಜಯ್ ನೇಮಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ನಿನ್ನೆ ನಡೆದ ಕಾರ್ಯಕ್ರಮದ ವೇಳೆ ಡಾಲಿ ಧನಂಜಯ್ ಸಿಎಂ ಸಿದ್ದರಾಮಯ್ಯ ಹಲವು ಬೇಡಿಕೆಗಳಿಗೆ ಮನವಿ ಸಲ್ಲಿಸಿದ್ದಾರೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಕನ್ನಡದಲ್ಲಿ ಉತ್ತಮ ಸಿನಿಮಾಗಳು ಬರುತ್ತಿದೆ. ಕನ್ನಡ ಚಿತ್ರರಂಗಕ್ಕೆ ನೀಡುವ ಸಬ್ಸಿಡಿಗಳನ್ನು ಮುಂದುವರೆಸಿ, ಪ್ರಶಸ್ತಿಗಳನ್ನು ನೀಡುವುದನ್ನು ಸಹ ಮುಂದುವರೆಸಿ ಎಂದು ಮನವಿ ನೀಡಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂಸಿದ್ದರಾಮಯ್ಯ ಕನ್ನಡ ಚಿತ್ರರಂಗಕ್ಕೆ ಎಲ್ಲಾ ರೀತಿಯ ಬೆಂಬಲ, ಹಣಕಾಸಿನ ಸಹಕಾರವನ್ನು ನೀಡಲಿದ್ದೇವೆ. 2019 ರಿಂದ ಚಲನಚಿತ್ರ ಪ್ರಶಸ್ತಿಗಳನ್ನು ಕೊಟ್ಟಿಲ್ಲ. ಈಗ ನಾನು ಕಮಿಟಿಗಳನ್ನು ಮಾಡಿದ್ದೇನೆ.ಕಮಿಟಿ ವರದಿ ನೀಡಿದ ಕೂಡಲೇ ಪ್ರಶಸ್ತಿಗಳನ್ನು ನೀಡುತ್ತೇನೆ ಎಂದು ಹೇಳಿದರು.