alex Certify ಅನ್ನಭಾಗ್ಯ ಯೋಜನೆ’ಗೆ ದಶಕದ ಸಂಭ್ರಮ : `ಭಾವನಾತ್ಮಕ ಸಂದೇಶ’ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನ್ನಭಾಗ್ಯ ಯೋಜನೆ’ಗೆ ದಶಕದ ಸಂಭ್ರಮ : `ಭಾವನಾತ್ಮಕ ಸಂದೇಶ’ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅನ್ನಭಾಗ್ಯ ಯೋಜನೆ ಜಾರಿಯಾಗಿ ಇಂದಿಗೆ 10 ವರ್ಷ ತುಂಬಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಟ್ವಿಟರ್ ನಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು  ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ ಎಂದಿದ್ದಾರೆ.

ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ- ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ. ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ  ಮಾಡಿಕೊಂಡ ಸಂತೃಪ್ತಿ ನನ್ನದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...