ಬೆಂಗಳೂರು : ಐಸಿಸ್ ಉಗ್ರನ ಬೆಂಬಲಿಗನ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸಿದ್ದರಾಮಯ್ಯನವರು ಹುಬ್ಬಳ್ಳಿಯ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿ ಯೆಮೆನ್, ಸೌದಿ ಹಾಗು ಮಧ್ಯ ಪ್ರಾಚ್ಯ ದೇಶಗಳ ಪ್ರವಾಸಗಳ ವೇಳೆ ಭಯೋತ್ಪಾದಕ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಈ ಭಯೋತ್ಪಾದಕ ಬೆಂಬಲಿಗೆ ಹಿಂದೆಯೂ ಹಲವಾರು ಬಾರಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ. ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.