alex Certify ಶಕ್ತಿ ಯೋಜನೆಗೆ ಶತಕೋಟಿ ಸಂಭ್ರಮ : ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಕ್ತಿ ಯೋಜನೆಗೆ ಶತಕೋಟಿ ಸಂಭ್ರಮ : ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತು

ಬೆಂಗಳೂರು  : ಗ್ಯಾರಂಟಿ ಯೋಜನೆ ಜಾರಿ ಆಗೋದಿಲ್ಲ, ಜಾರಿ ಆದರೆ ರಾಜ್ಯ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಿ ಮೋದಿಯವರು ಸೇರಿದಂತೆ ಬಿಜೆಪಿ ನಾಯಕರು ಆಡಿಕೊಂಡಿದ್ದರು. ಈಗ ನಾಡು ಶಕ್ತಿ ಯೋಜನೆಯ ಶತಕೋಟಿ ಸಂಭ್ರಮ ಆಚರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯ ಶತಕೋಟಿ ಸಂಭ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರಿಗೆ ಆರ್ಥಿಕ ಶಕ್ತಿ ಕೊಡುವ ಜತೆಗೆ ಸಮಾಜದ ಎಲ್ಲಾ ವರ್ಗದ ಬಡ-ಮಧ್ಯಮ ವರ್ಗದವರಿಗೆ ಶಕ್ತಿ ತುಂಬುವ ವಿಚಾರದಲ್ಲಿ ನಾವು ಇಟ್ಟ ಹೆಜ್ಜೆ ಹಿಂದಿಡುವುದಿಲ್ಲ ಎಂದರು.

ದೇಶದ ಯಾವ ಸರ್ಕಾರಗಳೂ ಹಿಂದೆಂದೂ ಮಾಡದ ಸಾಧನೆಯನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಆರೇ ತಿಂಗಳಲ್ಲಿ ಸಾಧಿಸಿ ತೋರಿಸಿದೆ. ಸರ್ಕಾರದ ಸಾಧನೆಗಳ ದಾಖಲೆ ಕಣ್ಣ ಮುಂದಿದೆ. ವಿರೋಧ ಪಕ್ಷಗಳು ಸರ್ಕಾರದ ಬಗ್ಗೆ ಸುಳ್ಳು ಹೇಳುವುದನ್ನು ನಿಲ್ಲಿಸಬೇಕು. ಜೂನ್ 11 ಕ್ಕೆ ಶಕ್ತಿ ಯೋಜನೆ  ಜಾರಿ ಆಯಿತು. ನವೆಂಬರ್ 23 ಕ್ಕೆ 100 ಕೋಟಿ 47 ಲಕ್ಷ ಮಹಿಳೆಯರು ಉಚಿತ ಪ್ರಯಾಣ ಮಾಡಿದ್ದಾರೆ. ಈ ಎಲ್ಲಾ ದಾಖಲೆಗಳು ಕಣ್ಣ ಮುಂದಿವೆ. ಆದರೂ ವಿರೋಧ ಪಕ್ಷಗಳು ಸುಳ್ಳು ಹೇಳುತ್ತವೆ ಎಂದು ಹೇಳಿದ್ದಾರೆ.

ಬಸ್ ಪ್ರಯಾಣಿಕರಲ್ಲಿ ಶೇ55 ರಷ್ಟು ಉಚಿತ ಬಸ್ ಪ್ರಯಾಣ ಮಾಡಿದ ಮಹಿಳೆಯರೇ ಇದ್ದಾರೆ. ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವುದು ನಮ್ಮ ಗುರಿ. ವಿರೋಧ ಪಕ್ಷದವರ ಟೀಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ.  1 ಕೋಟಿ 17 ಲಕ್ಷ ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡು ಇವರಲ್ಲಿ 1 ಕೋಟಿ 10 ಲಕ್ಷ ಮಹಿಳೆಯರಿಗೆ  ತಿಂಗಳಿಗೆ 2 ಸಾವಿರ ರೂಪಾಯಿ ತಲುಪುತ್ತಿದೆ. ಎಲ್ಲಾ ಜಾತಿ-ಧರ್ಮದ ಬಡವರು ಮಧ್ಯಮ ವರ್ಗದವರ ಮಹಿಳೆಯರಿಗೆ ಈ ಸೌಲಭ್ಯ ತಲುಪುತ್ತಿದೆ ಎಂದರು.

ಜೊತೆಗೆ ಕೋಟಿ ಕೋಟಿ ಮನೆಗೆ ಉಚಿತ ವಿದ್ಯುತ್ ಮತ್ತು ಅಕ್ಕಿ ಹಾಗೂ ಅಕ್ಕಿಯ ಹಣವನ್ನು ಜನರ ಮಡಿಲಿಗೆ ಹಾಕುತ್ತಿದ್ದೇವೆ. ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಕೆಲವರಿಗೆ ಹೊಟ್ಟೆಯುರಿ.

ಬಡವರ ಕೈಯಲ್ಲಿ  ದುಡ್ಡು ಇರಬೇಕು ಎನ್ನುವುದು ನಮ್ಮ ಗುರಿ. ಹಣ ಇದ್ದರೆ ಆರ್ಥಿಕತೆಗೆ ಚೈತನ್ಯ ಬರುತ್ತದೆ. ಈ ಚೈತನ್ಯ ತುಂಬುವ ಕಾರ್ಯಕ್ರಮವನ್ನು ನಾವು ಘೋಷಿಸಿ, ಸಾಧಿಸಿ ತೋರಿಸಿದ್ದೀವಿ.  ಜನರಿಗೆ ನಾವು ಕೊಟ್ಟ ಹಣ ವಾಪಾಸ್ ಸರ್ಕಾರಕ್ಕೇ ಬರುತ್ತದೆ. ನಾವು ಪುನಃ ಜನರ ಜೇಬಿಗೆ ಅದೇ ಹಣವನ್ನು ಹಾಕುತ್ತೇವೆ. ಇದರಿಂದ ಜಿಡಿಪಿ, ಆರ್ಥಿಕ ಚಟುವಟಿಕೆ ವೃದ್ಧಿಯಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...