alex Certify ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ಕೊರತೆ ನೀಗಿಸಲು ಸರ್ಕಾರದಿಂದ ಕ್ರಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರು ಸೇರಿ ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿದ್ಯುತ್ ಕೊರತೆ ನೀಗಿಸಲು ಸರ್ಕಾರದಿಂದ ಕ್ರಮ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಕೊರತೆ ನೀಗಿಸಿ, ಸಮರ್ಪಕವಾಗಿ ವಿದ್ಯುತ್ ಪೂರೈಸಲು ಸರ್ಕಾರದಿಂದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ವಿದ್ಯುತ್ ಕ್ಷಾಮ ನೀಗಿಸಲು ಹೊರಗಿನಿಂದ ವಿದ್ಯುತ್ ಕೊಳ್ಳುತ್ತಿದ್ದೇವೆ. ಎಲ್ಲಾ ಸಕ್ಕರೆ ಕಾರ್ಖಾನೆಗಳು ಪ್ರಾರಂಭವಾಗುತ್ತಿದ್ದು, ಅಲ್ಲಿ ಕೋಜನರೇಷನ್ ನಿಂದ ಉತ್ಪಾದನೆ ಆಗುವ ವಿದ್ಯುತನ್ನು ಕೊಂಡುಕೊಳ್ಳುತ್ತೇವೆ. ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿ ಸಂಸ್ಥೆಗಳು ರಾಜ್ಯಕ್ಕೆ ನೀಡಬೇಕೆಂದು ಆದೇಶ ಹೊರಡಿಸಿದ್ದೇವೆ. ವಿದ್ಯುತ್ ಕೊರತೆ ನೀಗಿಸಲು ಎಲ್ಲಾ ರೀತಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

2019-23ರ ಅವಧಿಯಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲು ಹಿಂದಿನ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈಗ ಬರ ಬಂದಿರುವುದರಿಂದ ವಿದ್ಯುತ್ ತೊಂದರೆಯಾಗಿರುವುದಕ್ಕೆ ಅವರೇ ಕಾರಣ. 16,000 ಮೆಗಾ ವ್ಯಾಟ್ ಸೌರ ವಿದ್ಯುತ್ ಉತ್ಪಾದನೆಯನ್ನು ನಾವು ಮಾಡಿದ್ದೆವು. ನವೀಕರಿಸಬಹುದಾದ ಇಂಧನ ಮೂಲಗಳ ಸದ್ಬಳಕೆಗೆ ಹಿಂದಿನ ಸರ್ಕಾರ ಒತ್ತು ನೀಡಿದ್ದರೆ ಪರಿಸ್ಥಿತಿ ಬೇರೆಯದೆ ಇರುತ್ತಿತ್ತು ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...