ಬೆಳಗಾವಿ: ಪೊಲೀಸ್ ಠಾಣೆಯಲ್ಲಿ ಬಿಜೆಪಿ ಪಕ್ಷದ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಸಂಬಂಧಪಟ್ಟ ಠಾಣೆಯ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಪೊಲೀಸ್ ಠಾಣೆಯೊಂದರಲ್ಲಿ ರಾಜಕೀಯ ಪಕ್ಷದ ಸಭೆ ನಡೆಸಲು ಅವಕಾಶ ನೀಡಿದ್ದು ತಪ್ಪು. ಸಿ.ಟಿ. ರವಿಯವರಿಗೆ ರಕ್ಷಣೆ ನೀಡುವ ಉದ್ದೇಶದಿಂದ ಅವರನ್ನು ಬೇರೆಡೆಗಳಿಗೆ ಕರೆದೊಯ್ಯಲಾಗಿತ್ತು ಎಂದು ಬೆಳಗಾವಿಯ ಪೊಲೀಸ್ ಕಮೀಷನರ್ ರವರು ಸಹ ಸ್ಪಷ್ಟಪಡಿಸಿದ್ದಾರೆ ಎಂದು ಹೇಳಿದ್ದಾರೆ.
ರವಿಯವರು ತಮ್ಮ ತಪ್ಪನ್ನು ಮರೆಮಾಚಲು ಈ ರೀತಿ ಮಾಡುತ್ತಿದ್ದು, ಅವರ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ. ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.