ಬೆಂಗಳೂರು : ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು ನಗರದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಎಷ್ಟೇ ಹಣ ಖರ್ಚಾದರೂ ಲೆಕ್ಕಿಸದೆ ಬೆಂಗಳೂರು ಜನರಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಎಲ್ಲ ಅಧಿಕಾರಿಗಳಿಗೆ ನೀಡಿದ್ದೇವೆ. ನೀರಿನ ಸಮಸ್ಯೆ ಇರುವ ಕಡೆ ಕಾವೇರಿ ನೀರು, ಕೊಳವೆ ಬಾವಿ ಇಲ್ಲವೇ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಸೂಚನೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.