ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇಂದು ಸಿಎಂ ಸಿದ್ದರಾಮಯ್ಯ ಅವರು 262 ನೂತನ ಆಂಬ್ಯುಲೆನ್ಸ್ ಗಳಿಗೆ ಚಾಲನೆ ನೀಡಲಿದ್ದಾರೆ.
ಇಂದು ಬೆಳಗ್ಗೆ 10.30ಕ್ಕೆ ವಿಧಾನಸೌಧ ಪೂರ್ವದ್ವಾರದ ಆವರಣದಲ್ಲಿ 262 ನೂತನ ಆಂಬ್ಯುಲೆನ್ಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
262 ಹೊಸ ಆಂಬ್ಯುಲೆನ್ಸ್ಗಳ ಪೈಕಿ 157 ಬೇಸಿಕ್ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್ಗಳು ಇದ್ದರೆ, 105 ಸುಧಾರಿತ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್ಗಳಿಗೆ ಇದ್ದು, ರೋಗಿಗಳ ಸುರಕ್ಷತಾ ದೃಷ್ಟಿಯಿಂದ ತಯಾರಿಸಲಾಗಿದೆ.