ಬೆಂಗಳೂರು : ಇಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರಾಣಪ್ರತಿಷ್ಠಾಪನೆ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಶ್ರೀ ಸೀತಾರಾಮ ಲಕ್ಷಣಸ್ವಾಮಿ ದೇವಸ್ಥಾನವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ಬೆಂಗಳೂರು ಪೂರ್ವ ತಾಲೂಕಿನ ಮಹದೇವಪುರ ಕ್ಷೇತ್ರದ ಹಿರಂಡಹಳ್ಳಿಯಲ್ಲಿ ಶ್ರೀ ಸೀತಾರಾಮ ಲಕ್ಷ್ಮಣಸ್ವಾಮಿ ದೇವಸ್ಥಾನವನ್ನು ನಿರ್ಮಾಣ ಮಾಡಲಾಗಿದೆ. ದೇಗುಲದ ಅಂಗಳದಲ್ಲಿ ೩೨ ಅಡಿ ಎತ್ತರದ ಆಂಜನೇಯ ಮೂರ್ತಿಯನ್ನೂ ಪ್ರತಿಷ್ಠಾಪಿಸಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ರಾಜ್ಯದಲ್ಲಿ ಇಂದು ರಜೆ ಇಲ್ಲ, ದೇಗುಲದಲ್ಲಿ ವಿಶೇಷ ಪೂಜೆ
ಅಯೋಧ್ಯೆಯ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ದಿನವಾದ ಸೋಮವಾರ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ. ಆದರೆ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ವಿಶೇಷ ಪೂಜೆ ಇರಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಇಂದು ದಾಸೋಹ, ಪಾನಕ, ಫಲಹಾರದ ಬಗ್ಗೆ ನನಗೆ ಮಾಹಿತಿ ಇಲ್ಲ. ಆದರೆ ನಾಳೆ ರಾಜ್ಯದಲ್ಲಿ ರಜೆ ಘೋಷಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ. ವಿವಿಧ ರಾಜ್ಯಗಳು ಸರ್ಕಾರಿ ರಜೆ ಘೋಷಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ರಜೆ ಘೋಷಣೆ ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಇಂದು ರಜೆ ಇಲ್ಲ ಎಂದು ತಿಳಿಸಿದ್ದಾರೆ.