alex Certify Watch Video : ‘ವೀರ ಮಕ್ಕಳ’ ಕುಣಿತಕ್ಕೆ ಮಸ್ತ್ ಸ್ಟೆಪ್ ಹಾಕಿದ ಸಿಎಂ ಸಿದ್ದರಾಮಯ್ಯ : ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Watch Video : ‘ವೀರ ಮಕ್ಕಳ’ ಕುಣಿತಕ್ಕೆ ಮಸ್ತ್ ಸ್ಟೆಪ್ ಹಾಕಿದ ಸಿಎಂ ಸಿದ್ದರಾಮಯ್ಯ : ವಿಡಿಯೋ ವೈರಲ್

ಬೆಂಗಳೂರು : ವೀರ ಮಕ್ಕಳ ಕುಣಿತಕ್ಕೆ ಸಿಎಂ ಸಿದ್ದರಾಮಯ್ಯ ಮಸ್ತ್ ಸ್ಟೆಪ್ ಹಾಕಿದ್ದು, ವಿಡಿಯೋ ವೈರಲ್ ಆಗಿದೆ.

ಹಂಪಿಯಲ್ಲಿ ನಡೆದ ‘ಕರ್ನಾಟಕ ಸಂಭ್ರಮ-50’ರ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದರು. ಸಿದ್ದರಾಮಯ್ಯರ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆಯುತ್ತಿದೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ ವಿಡಿಯೋವನ್ನು ತಮ್ಮ ಫೇಸ್ಬುಕ್ನಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, “ಹಂಪಿಯಲ್ಲಿ ಇಂದು ನಡೆದ ಕರ್ನಾಟಕ ಸಂಭ್ರಮ-50 ರ ಉದ್ಘಾಟನಾ ಸಮಾರಂಭದಲ್ಲಿ ವೀರಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದ್ದು ಮೈಮನ ಹಗುರಾಗಿಸಿತು. ಬಾಲ್ಯದಲ್ಲಿ ಕಲಿತ ವಿದ್ಯೆ ಬದುಕಿನುದ್ದಕ್ಕೂ ನೆನಪಿನಲ್ಲುಳಿಯುತ್ತಂತೆ. ಹೆಜ್ಜೆ ಹಾಕುತ್ತಾ ಹಾಕುತ್ತಾ ನನ್ನೂರ ಗೆಳೆಯರೊಡನೆ ಕುಣಿಯುತ್ತಿದ್ದ ಬಾಲ್ಯದ ದಿನಗಳು ನೆನಪಾದವು” ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

 

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...