ಕೋರ್ಟ್ ತೀರ್ಪಿನ ಬಳಿಕ ಜಿಪಂ, ತಾಪಂ ಚುನಾವಣೆ: ಸಿಎಂ ಸಿದ್ಧರಾಮಯ್ಯ

ದಾವಣಗೆರೆ: 60% ಕಮಿಷನ್ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಆರೋಪ‌ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಹೇಳಿದ್ದಾರೆ.

ರಸ್ತೆ ಸಾರಿಗೆ ಸಂಸ್ಥೆಗಳ ಬಸ್ ದರ ಹೆಚ್ಚಿಸಿರುವುದು ಇದು ಮೊದಲಲ್ಲ. ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ ಗಳ ಖರೀದಿ ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ. ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದರೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.

ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.

ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read